ಬೆಳಗಾವಿ: ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ

ಬೆಳಗಾವಿ : ಜಿಲ್ಲೆಯ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ.
ಕೊಲೆ ಆರೋಪಿ ಯಲ್ಲಪ್ಪ ಮಾಳಗಿ(45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ರೇಣುಕಾ ಮಾಳಗಿ (40) ಹಾಗೂ ಮಲ್ಲಿಕಾರ್ಜುನ ಜಗದಾರ (36) ಹಾಗೂ ಹತ್ಯೆಗೀಡಾದವರು. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಆದರೆ ನಿಖರವಾದ ಕಾರಣ ತನಿಖೆ ನಂತರವೇ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಕತಂಗೇರಹಾಳ ಗ್ರಾಮದ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಲ್ಲಿಕಾರ್ಜುನ ಮನೆ ಹೊರ ಭಾಗದಲ್ಲಿ ಸ್ನಾನ ಮಾಡುತ್ತಿರುವಾಗಲೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹಾಗೂ ಅಂಕಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement