ಭಾರತದ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ ಅಗರ್ಕರ್ ನೇಮಕ

ನವದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ಅವರನ್ನು ಭಾರತ ಪುರುಷರ ಕ್ರಿಕೆಟ್ ತಂಡದ ಆಯ್ಕೆಗಾರರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (CAC), ಪುರುಷರ ಆಯ್ಕೆ ಸಮಿತಿಯಲ್ಲಿ ಒಬ್ಬ ಆಯ್ಕೆಗಾರನ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರು ಅಜಿತ್ ಅಗರ್ಕರ್ ಅವರನ್ನು ಈ ಸ್ಥಾನಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದರು.
ಭಾರತದ ಮಾಜಿ ಆಲ್‌ರೌಂಡರ್ 26 ಟೆಸ್ಟ್‌ಗಳು, 191 ಏಕದಿನದ ಪಂದ್ಯಗಳು ಮತ್ತು ನಾಲ್ಕು T20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ, 110 ಪ್ರಥಮ ದರ್ಜೆ, 270 ಲಿಸ್ಟ್ ಎ, ಮತ್ತು 62 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಜಿತ ಅಗರ್ಕರ್‌ ಅವರು 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ T20 ವಿಶ್ವಕಪ್‌ನಲ್ಲಿ ಭಾರತದ ವಿಜಯಶಾಲಿ ತಂಡದ ಭಾಗವಾಗಿದ್ದರು. 2000 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನದ ಪಂದ್ಯದಲ್ಲಿ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಭಾರತೀಯ ಆಟಗಾರನ ದಾಖಲೆಯನ್ನು ಅವರು ಹೊಂದಿದ್ದಾರೆ. ಅವರು ಕೇವಲ 23 ಪಂದ್ಯಗಳಲ್ಲಿ 50 ODI ವಿಕೆಟ್‌ಗಳನ್ನು ವೇಗವಾಗಿ ತಲುಪಿದ ದಾಖಲೆಯನ್ನು ಹೊಂದಿದ್ದಾರೆ.
ಫೆಬ್ರವರಿಯಲ್ಲಿ ಚೇತನ್ ಶರ್ಮಾ ಅನೌಪಚಾರಿಕವಾಗಿ ನಿರ್ಗಮಿಸಿದ ನಂತರ ಖಾಲಿ ಇರುವ ಹುದ್ದೆಯನ್ನು ಅವರು ವಹಿಸಿಕೊಳ್ಳಲಿದ್ದಾರೆ.
ಪುರುಷರ ಆಯ್ಕೆ ಸಮಿತಿ: ಅಜಿತ ಅಗರ್ಕರ್ (ಅಧ್ಯಕ್ಷರು), ಶಿವಸುಂದರ ದಾಸ, ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಆಯ್ಕೆ ಸಮಿತಿಯಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement