ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆ ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4ರ ಮಂಗಳವಾರ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಸುರಿಯುತ್ತಿರುವುದರಿಂದ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡಲು ಅಲ್ಲಿನ ತಹಶೀಲ್ದಾರರಿಗೆ ಸೂಚಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಭಾರತೀಯ ಹವಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ನಿಮ್ಮ ಕಾಮೆಂಟ್ ಬರೆಯಿರಿ

advertisement