ಭಾರೀ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಐದು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕಾರವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಪ್ರದೇಶ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿ: ರಜೆ ಘೋಷಣೆ ಅಧಿಕಾರ ತಹಶೀಲ್ದಾರರಿಗೆ
ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸ್ಥಳೀಯ ಮಳೆಯ ಪ್ರಮಾಣ, ಪರಿಸ್ಥಿತಿ ಆಧರಿಸಿ ಅವಶ್ಯ ಇರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿ ಕ್ರಮ ಗಮನದಲ್ಲಿಟ್ಟುಕೊಂಡು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement