ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕರಾವಳಿ ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ಜುಲೈ 5 ರಂದು ರಜೆ ಘೋಷಿಸಲಾಗಿದೆ.
ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಜುಲೈ 5 ರಂದು ಬೆಳಿಗ್ಗೆ 8:30 ಗಂಟೆ ವರೆಗೆ ಭಾರಿ ಮಳೆ ಬೀಳುವ ಮಾಹಿತಿ ನೀಡಿದ್ದು ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆ ಕ್ರಮವಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ನಿಮ್ಮ ಕಾಮೆಂಟ್ ಬರೆಯಿರಿ

advertisement