2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣು: 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: 2024 ರ ಚುನಾವಣೆಗೆ ಮುಂಚಿತವಾಗಿ ಹಾಗೂ ಕೆಲವು ರಾಜ್ಯಗಳಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ನಾಲ್ಕು ರಾಜ್ಯಗಳಿಗೆ ಮಂಗಳವಾರ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಜೆಪಿಮಂಗಳವಾರ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ರಾಜ್ಯ ಮುಖ್ಯಸ್ಥರನ್ನು ನೇಮಿಸಿದೆ.
ಪಕ್ಷವು ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ಕ್ರಮವಾಗಿ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ, ಸುನಿಲ ಜಾಖರ ಮತ್ತು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.
ಹೇಳಿಕೆಯೊಂದರಲ್ಲಿ, ಪಕ್ಷವು ಮಾಜಿ ಕೇಂದ್ರ ಸಚಿವೆ ಡಿ. ಪುರಂದೇಶ್ವರಿ ಅವರನ್ನು ಆಂಧ್ರಪ್ರದೇಶಕ್ಕೆ ನೂತನ ರಾಜ್ಯಾಧ್ಯಕ್ಷರಾಗಿನೇಮಿಸಿದೆ ಮತ್ತು ತೆಲಂಗಾಣದಲ್ಲಿ ಒಬಿಸಿ ನಾಯಕ ಎಟೆಲಾ ರಾಜೇಂದ್ರ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರನ್ನಾಗಿನೇಮಕ ಮಾಡಿದೆ.

ಚುನಾವಣೆ ನಡೆಯಬೇಕಿರುವ ತೆಂಗಾಣದಲ್ಲಿ ರಾಜ್ಯಾಧ್ಯಕ್ಷರಾಗಿದ್ದ ಬಂಡಿ ಸಂಜಯಕುಮಾರ ಅವರ ಬದಲಿಗೆ ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಅವರನ್ನು ನೇಮಕ ಮಾಡಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಪುನರ್ ರಚನೆ ವೇಳೆ ಬಂಡಿ ಸಂಜಯಕುಮಾರ ಸಚಿವರಾಗಿ ಸೇರ್ಪಡೆಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಪಂಜಾಬ್‌ನಲ್ಲಿ ಅಶ್ವನಿ ಶರ್ಮಾ ಬದಲಿಗೆ ಸುನಿಲ ಜಾಖರ ಹಾಗೂ ಜಾರ್ಖಂಡದಲ್ಲಿ ದೀಪಕ ಪ್ರಕಾಶ ಅವರ ಬದಲಿಗೆ ಬಾಬುಲಾಲ ಮರಾಂಡಿ ಅವರನ್ನು ನೇಮಕ ಮಾಡಿದೆ.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಇತರ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಂಡ ನಾಯಕರಿಗೆ ಪ್ರಾಧಾನ್ಯತೆ ನೀಡಲಾಗಿದೆ. ಪಂಜಾಬ್‌ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಸುನಿಲ ಜಾಖರ ಮತ್ತು ತೆಂಗಾಣದಲ್ಲಿ ಚುನಾವಣೆ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಎಟೆಲಾ ರಾಜೇಂದ್ರ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ತೊರೆದು ಬಿಜೆಪಿ ಸೇರಿದ್ದಾರೆ.
ಆಂದ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಿರುವ ಜಿ.ಪುರಂದೇಶ್ವರಿ ಕಾಂಗ್ರೆಸ್‌ನಲ್ಲಿದ್ದರು ಮತ್ತು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.
ಈ ಬೆಳವಣಿಗೆಯು ಪ್ರಧಾನಿ ಮೋದಿ ಸಚಿವ ಸಂಪುಟದ ಪುನರ್ರಚನೆ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement