ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ ನಗರದಿಂದ ತನ್ನ ಕಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಸರ್ಕಲ್ ಅಧಿಕಾರಿ (ಸಿವಿಲ್ ಲೈನ್ಸ್) ಅರವಿಂದ್ ಚೌರಾಸಿಯಾ ತಿಳಿಸಿದ್ದಾರೆ.
ಅವರ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು. ಕ್ರಿಕೆಟಿಗನ ಕಾರಿಗೆ ತೀವ್ರ ಹಾನಿಯಾಗಿದೆ, ಕಾರು ತೀವ್ರವಾಗಿ ನುಜ್ಜುಗುಜ್ಜಾದರೂ ಪ್ರವೀಣಕುಮಾರ ಮತ್ತು ಅವರ ಮಗ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.
ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್: 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಚಿನ್ನ ಗೆದ್ದ ಭಾರತ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement