ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ : ಪ್ರಮುಖ ಆಟಗಾರರಿಗೆ ವಿಶ್ರಾಂತಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ಸರಣಿಗೆ ಭಾರತದ ತಂಡವನ್ನು ಬುಧವಾರ ಪ್ರಕಟಿಸಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ತಂಡದಲ್ಲಿ ಕೆಲವು ಯುವ ಆಟಗಾರರಿಗೆ ಅವಕಾಶಗಳನ್ನು ನೀಡಲಾಗಿದ್ದು, ಹಲವಾರು ಪ್ರಮುಖ ಆಟಗಾರರನ್ನು ಆಯ್ಕೆ ಮಾಡಲಾಗಿಲ್ಲ. ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ (MI) ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಲಭಿಸಿದೆ. ಡೆದರು. ಐಪಿಎಲ್ 2023ರಲ್ಲಿ ಆರೆಂಜ್ ಕ್ಯಾಪ್ ಗೆದ್ದ ಯಶಸ್ವಿ ಜೈಸ್ವಾಲ್ ಕೂಡ ಆಯ್ಕೆಯಾಗಿದ್ದಾರೆ. ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶಕುಮಾರ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ವೇಗಿಗಳನ್ನು ಆಯ್ಕೆ ಮಾಡಲಾಗಿದೆ.
ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಇಬ್ಬರು ವಿಕೆಟ್ ಕೀಪರ್‌ಗಳನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಸೂರ್ಯಕುಮಾರ ಯಾದವ್ ಮತ್ತು ಶುಬಮನ್‌ ಗಿಲ್ ಕೂಡ ಇದ್ದಾರೆ. ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ T20 ಸರಣಿಯು ಆಗಸ್ಟ್ 3 ರಿಂದ ಆಗಸ್ಟ್ 13 ರವರೆಗೆ ನಡೆಯಲಿದೆ. ಸರಣಿಯ ಮೊದಲ ಪಂದ್ಯವನ್ನು ತರೌಬಾದಲ್ಲಿರುವ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಎರಡು ಮತ್ತು ಮೂರನೇ ಪಂದ್ಯಗಳು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ.
ಎರಡು ತಂಡಗಳು ನಂತರ ಅಮೆರಿಕ್ಕೆ ಹೋಗುತ್ತವೆ, ಅಲ್ಲಿ ಕೊನೆಯ ಎರಡು ಟಿ 20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್‌ನಲ್ಲಿ ನಡೆಯಲಿವೆ.
 ಭಾರತದ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಅಕ್ಷರ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ ಯಾದವ್, ರವಿ ಬಿಷ್ಣೋಯ್, ಅರ್ಶದೀಪ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶಕುಮಾರ.
ಈ ವಾರದ ಆರಂಭದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗೆ ಭಾರತದ ತಂಡಗಳನ್ನು ಆಯ್ಕೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement