ಅಮೆರಿಕದಲ್ಲಿ ಚಿತ್ರೀಕರಣದ ವೇಳೆ ನಟ ಶಾರುಖ್ ಖಾನಗೆ ಗಾಯ

ಬಾಲಿವುಡ್‌ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ವೇಳೆ ಮೂಗಿಗೆ ಗಾಯ ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಶೂಟಿಂಗ್ ವೇಳೆ ಖಾನ್ ಅವರ ಮೂಗಿಗೆ ಗಾಯವಾಗಿ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ತಸ್ರಾವ ನಿಲ್ಲಿಸಲು ಸಣ್ಣ ಶಸ್ತ್ರ ಚಿಕಿತ್ಸೆ ಮಾಡಬೇಕಾಯಿತು ಎಂದು ಎಕಾನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಶಸ್ತ್ರಚಿಕಿತ್ಸೆಯ ನಂತರ ಖಾನ್ ಈಗ ಮುಂಬೈ ಮನೆಗೆ ಮರಳಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ.
ಶಾರುಖ್‌ ಖಾನ್‌ ಪ್ರಾಜೆಕ್ಟ್‌ಗಾಗಿ ಲಾಸ್ ಏಂಜಲೀಸ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
57 ವರ್ಷ ವಯಸ್ಸಿನ ಶಾರುಖ್‌ ಕಾನ್‌ ತಮ್ಮ 34 ವರ್ಷಗಳ ನಟನಾ ವೃತ್ತಿಜೀವನದಲ್ಲಿ ಹಲವಾರು ಬಾರಿ ಗಾಯಗೊಂಡಿದ್ದಾರೆ ಮತ್ತು ಈ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಮೊಣಕಾಲು ಮತ್ತು ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement