ಚೆನ್ನೈ: ಏರಿಕೆಯಾಗುತ್ತಿರುವ ಬೆಲೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ.
82 ಪಿಡಿಎಸ್ ಅಂಗಡಿಗಳಲ್ಲಿ ಟೊಮೆಟೊ ಕೆಜಿಗೆ 60 ರೂ.ಗಳಂತೆ ಮಾರಾಟ ಮಾಡುತ್ತಿದೆ. ತಮಿಳುನಾಡು ರಾಜ್ಯಾದ್ಯಂತ ಸದ್ಯ ಟೊಮೇಟೊ ಕೆಜಿಗೆ 120-140 ರೂ.ಗಳಿಗೆ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ.
ತಮಿಳುನಾಡು ಸಹಕಾರಿ ಸಚಿವ ಎಸ್. ಪೆರಿಯಕರುಪ್ಪನ್ ಅವರು ಟೊಮೇಟೊ ಮಾರಾಟಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ಅಂಶಗಳನ್ನು ಚರ್ಚಿಸಲು ರಾಜ್ಯ ಸಚಿವಾಲಯದಲ್ಲಿ ಸಭೆ ನಡೆಸಿದ್ದರು.
ಟೊಮೆಟೊ ಬೆಲೆ ಏರಿಕೆಯಾಗುತ್ತಲೇ ಇದ್ದರೆ, ಗ್ರಾಹಕರಿಗೆ ತೊಂದರೆಯಾಗದಂತೆ ಅದನ್ನು ಖರೀದಿಸಲು ಮತ್ತು ಕಡಿಮೆ ಬೆಲೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ಮುಂದಿನ ಕ್ರಮಗಳನ್ನು ಪ್ರಾರಂಭಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.
ಫಾರ್ಮ್ ಫ್ರೆಶ್ ಔಟ್ಲೆಟ್ಗಳು ಪಡಿತರ ಅಂಗಡಿಗಳ ಮೂಲಕ ಮಾರಾಟ ಮಾಡುವುದರ ಜೊತೆಗೆ ಟೊಮೆಟೊಗಳನ್ನು ಸಹ ಮಾರಾಟ ಮಾಡುತ್ತಿವೆ.
ನಿಮ್ಮ ಕಾಮೆಂಟ್ ಬರೆಯಿರಿ