ವೀಡಿಯೊ | ಭಾರೀ ಮಳೆಗೆ ಭೂಕುಸಿತದ ವೇಳೆ ಬೃಹತ್ ಬಂಡೆ ಅಪ್ಪಳಿಸಿ ಕಾರುಗಳು ಪುಡಿಪುಡಿ : ಇಬ್ಬರು ಸಾವು, ಮೂವರಿಗೆ ಗಾಯ

ಕೊಹಿಮಾ-ದಿಮಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಜಖಂಗೊಳಿಸಿವೆ. ಪೊಲೀಸ್ ಚೆಕ್‌ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಘಟನೆಯ ವೈರಲ್ ವೀಡಿಯೊದಲ್ಲಿ ಬೃಹತ್ ಬಂಡೆಯು ಒಂದರ ನಂತರ ಒಂದರಂತೆ ಎರಡು ಕಾರುಗಳಿಗೆ ಅಪ್ಪಳಿಸುವುದನ್ನು ತೋರಿಸುತ್ತದೆ.

ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಗಂಭೀರ ಹಾನಿಯಾಗಿದೆ. ಎರಡು ಕಾರುಗಳ ಮುಂದೆ ಮತ್ತೊಂದು ಬಂಡೆಯು ಕಾರಿಗೆ ಅಪ್ಪಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಾರು ಎಡಭಾಗದಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.ವಾಹನಗಳು ಕೊಹಿಮಾದಿಂದ ಬರುತ್ತಿದ್ದವು. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡ ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತಪಟ್ಟವರ ಗುರುತು ಇನ್ನೂ ತಿಳಿದುಬಂದಿಲ್ಲ ಎಂದು ನಾಗಾಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗಾಲ್ಯಾಂಡ್ ಮುಖ್ಯಮಂತ್ರಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಮೃತರ ಮುಂದಿನ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   'ಯಾರೂ ಮೋದಿಗೆ ಮತ ಹಾಕಬೇಡಿ' ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement