ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ : ತೆರಿಗೆಯೋ.. ವಿನಾಯ್ತಿಯೋ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ನೀತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿರುವುದರ ಮಧ್ಯೆ ಬಜೆಟ್‌ ಮಂಡನೆಯಾಗಲಿದೆ.
ತಮ್ಮ 14ನೇ ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಈಗಾಗಲೇ ಬಜೆಟ್ ಪೂರ್ವಭಾವಿ ಸಭೆ ನಡೆಸಿಯಾಗಿದೆ. ವಿವಿಧ ಗ್ಯಾರಂಟಿ ಯೋಜನೆಗಳ ಜಾರಿ ಭರವಸೆಯೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಹಣಕಾಸು ಹೊಂದಿಸುವುದು ಸವಾಲಾಗಿದೆ. ಕಾಂಗ್ರೆಸ್ ಚುನಾವಣೆಗೂ ಮುನ್ನ ಘೋಷಿಸಿದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಸೇರಿದಂತೆ ಐದು ಯೋಜನೆಗಳಿಗೆ ವಾರ್ಷಿಕ ಸರಿಸುಮಾರು 60 ಸಾವಿರ ಕೋಟಿ ರೂ.ಗಳು ಹೆಚ್ಚು ಹಣಕಾಸಿನ ಅಗತ್ಯವಿದೆ. ಇದಕ್ಕೆ ಹೇಗೆ ಹಣ ಕ್ರೋಢೀಕರಣಗೊಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಅಲ್ಲದೆ ಈ ಹಣ ಕ್ರೋಢೀಕರಣಕ್ಕೆ ಬಜೆಟ್‌ ನಲ್ಲಿ ಸರ್ಕಾರ ಯಾವುದಕ್ಕೆ ತೆರಿಗೆ ವಿಧಿಸಲಿದೆ ಹಾಗೂ ಯಾವುದಕ್ಕೆ ಎಷ್ಟು ವಿನಾಯ್ತಿ ನೀಡಲಿದೆ, ಯಾವ ಹೊಸ ಯೋಜನೆ ಜಾರಿಗೆ ತರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.ಜೊತೆಗೆ ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಭೂತ ಸೌಕರ್ಯ, ಕೈಗಾರಿಕೆಗಳು ಸೇರಿದಂತೆ ಆದ್ಯತಾ ವಲಯಗಳಿಗೆ ಎಷ್ಟು ಪ್ರಾಧಾನ್ಯತೆ ಸಿಗಲಿದೆ ಎಂಬುದು ಕೂಡ ಮುಖ್ಯವಾಗುತ್ತದೆ.
ಅಲ್ಲದೆ, ಜೊತೆಗೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಪ್ರಮುಖ ಭರವಸೆಗಳನ್ನು ಈಡೇರಿಸಲು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಒತ್ತು ನೀಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿಕೊಂಡು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವ ಬಯಕೆಯೊಂದಿಗೆ ಜನಪ್ರಿಯ ಯೋಜನೆಗಳಿಗೆ ಮಣೆ ಹಾಕಬಹುದು.

ಪ್ರಮುಖ ಸುದ್ದಿ :-   ಬೆಂಗಳೂರಿನ ಸ್ಫೋಟ ಪ್ರಕರಣ ಭೇದಿಸಿದ ಪೊಲೀಸರು: ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣ ; ಮೂವರ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement