ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆ ಉಪಾಧ್ಯಕ್ಷರಾಗಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು, ಗುರುವಾರ ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್‌ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು ನಿನ್ನೆ ಬುಧವಾರ ಶಾಸಕ ರುದ್ರಪ್ಪ ಲಮಾಣಿ ಉಮೇದುವಾರಿಕೆ ಸಲ್ಲಿಸಿದ್ದರು. ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ತೀರ್ಮಾನಿಸಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement