ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು, ಗುರುವಾರ (ಜುಲೈ 6)ಸಹ ರಜೆ ಮುಂದುವರಿಸಲಾಗಿದೆ.
ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ 1 ರಿಂದ 12 ತರಗತಿವರೆಗೆ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುವಾರ ಬೆಳಿಗ್ಗೆ ಆದೇಶಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ