ಮುಂದುವರಿದ ಮಳೆ : ದಕ್ಷಿಣ ಕನ್ನಡ, ಉಡುಪಿ ಶಾಲೆ-ಪಿಯು ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ

ಮಂಗಳೂರು/ಉಡುಪಿ : ಜೋರಾದ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ಘೋಷಿಸಲಾಗಿದೆ.
ಸತತ ನಾಲ್ಕನೇ ದಿನ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಶುಕ್ರವಾರದ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಕ್ಕಳ ಹಿತದೃಷ್ಟಿ ಇಟ್ಟು ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement