ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ : ರೆಡ್‌ ಅಲರ್ಟ್‌-ಆರೇಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ ಹಾಗೂ ಕರಾವಳಿ ಜಿಲ್ಲೆಗಳಾದ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜುಲೈ 7ರ ವರೆಗೆ) ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 6ರ ಇಂದು ಮಧ್ಯಾಹ್ನದಿಂದ ಜುಲೈ 7ರ ಬೆಳಗ್ಗೆ 8:30ರ ವರೆಗೆ ಅಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು. ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಜೋರಾದ ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ.
ಈಗಾಗಲೇ ನಿರಂತರ ಮಳೆಯಿಂದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದ ಹಲವು ಪ್ರದೇಶಗಳು ಜಲಾವೃತವಾಗಿದ್ದು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಅನೇಕ ಗ್ರಾಮಗಳಿಗೆ ಸಂಪರ್ಕ ಇಲ್ಲವಾಗಿದೆ. ತಗ್ಗು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement