ಕರ್ನಾಟಕ ಬಜೆಟ್ 2023-24: ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ. ಮೀಸಲು, ಬೆಂಗಳೂರಿಗೆ ಬಂಪರ್‌, ಮದ್ಯಪ್ರಿಯರಿಗೆ ಶಾಕ್‌, ರೈತರಿಗೆ ಶೂನ್ಯ ಬಡ್ಡಿದರದ ಸಾಲದ ಮಿತಿ ಹೆಚ್ಚಳ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್‌ ಅನ್ನು ಮಂಡಿಸಿದ್ದಾರೆ.
ಕರ್ನಾಟಕ ಬಜೆಟ್ 2023-24ರ ಒಟ್ಟು ಗಾತ್ರ 3.27 ಲಕ್ಷ ಕೋಟಿ ರೂ.ಗಳಾಗಿದೆ. ಅದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದಾರೆ. ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು ಮತ್ತು ದುರಸ್ತಿಗೆ ಅನುದಾನ ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಹಣ ಮೀಸಲಿಟ್ಟಿದ್ದಾರೆ. ರಾಜ್ಯದ ಅನ್ನದಾತರಿಗೆ ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷ ರೂ.ಗಳ ವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯದ ಮೇಲೆ ತೆರಿಗೆ ಹೆಚ್ಚಳ ಮಾಡಿದೆ.
ರಾಜ್ಯದ ಅಬಕಾರಿ ತೆರಿಗೆಯಲ್ಲಿ ಶೇ 20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ತೆರಿಗೆ ಶೇ 10ರಷ್ಟು ಹೆಚ್ಚಳವಾಗಲಿದೆ. ಇದು ಎಲ್ಲಾ 18 ಘೋಷಿತ ಬೆಲೆ ಸ್ಲಾಟ್‌ಗಳಿಗೆ ಅನ್ವಯವಾಗುತ್ತದೆ. ಮದ್ಯ ಮಾರಾಟದಿಂದ ಒಟ್ಟು 36 ಸಾವಿರ ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದ್ದಾರೆ.
1.62 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ
ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ
ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ
ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
ಇಲಾಖೆವಾರು ಅನುದಾನ ಹಂಚಿಕೆ ಹೀಗಿದೆ
ಶಿಕ್ಷಣ – 37,587 ಕೋಟಿ
ನೀರಾವರಿ – 19,044 ಕೋಟಿ
ಗ್ರಾಮೀಣಾಭಿವೃದ್ಧಿ – 18,038 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ – 24,166 ಕೋಟಿ
ಇಂಧನ – 22,773 ಕೋಟಿ
ಒಳಾಡಳಿತ ಮತ್ತು ಸಾರಿಗೆ – 16,638 ಕೋಟಿ
ಕಂದಾಯ – 16,167 ಕೋಟಿ
ಆರೋಗ್ಯ – 14,950 ಕೋಟಿ
ಸಮಾಜ ಕಲ್ಯಾಣ – 11,173 ಕೋಟಿ
ಆಹಾರ ಮತ್ತು ನಾಗರೀಕ ಪೂರೈಕೆ – 10,460 ಕೋಟಿ
ಲೋಕೋಪಯೋಗಿ – 10,143 ಕೋಟಿ
ಕೃಷಿ – 5,860 ಕೋಟಿ
ಪಶುಸಂಗೋಪನೆ ಮತ್ತು ಮೀನುಗಾರಿಕೆ – 3,024 ಕೋಟಿ
ಇತರೆ – 1,09,639 ಕೋಟಿ

ಇಂದಿನ ಪ್ರಮುಖ ಸುದ್ದಿ :-   ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಯಾವುದಕ್ಕೆ ಎಷ್ಟು ಹಣ..?
ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ
ನಮ್ಮ ಮೆಟ್ರೋ ಯೋಜನೆ: 30,000 ಕೋಟಿ ರೂ
ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ
ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ
‘ಅನುಗ್ರಹ ಯೋಜನೆ’ ಮರು ಜಾರಿ-ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ
ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು
ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ
ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್
‘ಕೃಷಿ ಭಾಗ್ಯ ಯೋಜನೆ’ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.
ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ
ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ
ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು
ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕಲಬುರಗಿಯಲ್ಲಿ ತಾಯಿ – ಮಗು ಆಸ್ಪತ್ರೆ ನಿರ್ಮಾಣ – 70 ಕೋಟಿ ರೂ. ವೆಚ್ಚ
ಲಿಕಾ ನ್ಯೂನ್ಯತೆ ತಗ್ಗಿಸಲು 80 ಕೋಟಿ ವೆಚ್ಚದಲ್ಲಿ ‘ಮರುಸಿಂಚನ’ ಯೋಜನೆ ಜಾರಿ
ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆಗೆ ನಿರ್ಧಾರ
ವಿದ್ಯಾಸಿರಿ ಯೋಜನೆ – ಹಾಸ್ಟೆಲ್ ದೊರೆಯದ ವಿದ್ಯಾರ್ಥಿಗಳಿಗೆ ವಾರ್ಷಿಕ 15 ಸಾವಿರ ಕೊಡುವ ಯೋಜನೆ ಮುಂದುವರಿಕೆ -3.6 ಲಕ್ಷ…
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಕರಿಗೆ ಶೇ.50ರಷ್ಟು ಸಾಲ. ಗರಿಷ್ಠ ಮೂರು ಲಕ್ಷ ರೂಗಳ ವರೆಗಿನ ಸಹಾಯಧನ ನೀಡುವ ಸಾರಥಿ ಯೋಜನೆ ಜಾರಿ.

ಇಂದಿನ ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement