ಬೆಳಗಾವಿ :ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿಯೊಬ್ಬರು ಬಸದಿಯಿಂದ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಹಿರೇಕೋಡಿಯ ನಂದಿಪರ್ವತ ಜೈನ ಆಶ್ರಮದಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಗುರುವಾರ (ಜೂನ್ ೬) ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿದ್ದರೆ ಎನ್ನಲಾಗಿದೆ. ಅವರು ಬುಧವಾರ ರಾತ್ರಿ 10 ಗಂಟೆಯವರೆಗೆ ಆಶ್ರಮದ ತಮ್ಮ ಕೋಣೆಯಲ್ಲಿಯೇ ಇದ್ದರು ಎಂದು ಭಕ್ತರು ಹೇಳಿದ್ದಾರೆ.
ಗುರುವಾರ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಬಕಾಮಕುಮಾರ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ಹಿರೇಕೋಡಿಯ ಜೈನ ಆಶ್ರಮದಲ್ಲಿದ್ದಾರೆ.
ಮುನಿಗಳು ವಾಸವಿದ್ದ ಆಶ್ರಮದ ಕೋಣೆಯಲ್ಲಿ ಅವರು ಬಳಸುತ್ತಿದ್ದ ಪಿಂಚಿ, ಕಮಂಡಲು ಹಾಗೂ ಮೊಬೈಲ್ ಪತ್ತೆಯಾಗಿದೆ. ಜೈನ ಮುನಿಗಳು ಒಮ್ಮಿಂದ ಒಮ್ಮೆ ಕಾಣೆಯಾಗಿರುವುದು ಭಕ್ತರಲ್ಲಿ ಆತಂಕ ಮೂಡಿದೆ. ಈ ಕುರಿತಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ