ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸುವ ಕರಡು ಅಧಿಸೂಚನೆಗೆ ಕೇಂದ್ರದ ಅನುಮೋದನೆ : ಸಚಿವ ಗಡ್ಕರಿ

ನವದೆಹಲಿ : ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಅಳವಡಿಸುವುದನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಸಿದ್ಧಪಡಿಸಲಾದ ಕರಡು ಎನ್ 2 ಮತ್ತು ಎನ್ 3 ವರ್ಗಗಳ ಅಡಿಯಲ್ಲಿನ ಟ್ರಕ್‌ಗಳನ್ನು ಒಳಗೊಂಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.
“N2 ಮತ್ತು N3 ವರ್ಗಗಳಿಗೆ ಸೇರಿದ ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಅನುಮೋದಿಸಲಾಗಿದೆ. ರಸ್ತೆ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಟ್ರಕ್ ಚಾಲಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಈ ನಿರ್ಧಾರವು ಟ್ರಕ್ ಚಾಲಕರಿಗೆ ಆರಾಮದಾಯಕ ಕೆಲಸದ ವಾತಾವರಣ ಒದಗಿಸುವಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ, ಆ ಮೂಲಕ ಅವರ ದಕ್ಷತೆಯನ್ನು ಸುಧಾರಿಸುತ್ತದೆ ಮತ್ತು ಚಾಲಕರ ಆಯಾಸದ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
ಕಳೆದ ತಿಂಗಳು, ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಸಾರಿಗೆ ಕ್ಷೇತ್ರದಲ್ಲಿ ಟ್ರಕ್ ಚಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕೆಲಸದ ಪರಿಸ್ಥಿತಿಗಳು ಮತ್ತು ಮನಸ್ಸಿನ ಸ್ಥಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಅವಶ್ಯಕತೆಯಿದೆ ಎಂದು ಸಚಿವರು ಹೇಳಿದ್ದರು.

ಪ್ರಮುಖ ಸುದ್ದಿ :-   ಮೇ 31ರಂದೇ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ : ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಟ್ರಕ್‌ಗಳಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಶೀಘ್ರದಲ್ಲೇ ಕಡ್ಡಾಯಗೊಳಿಸಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ. ಟ್ರಕ್ ಚಾಲಕರು ತೀವ್ರತರವಾದ ಶಾಖದ ಪರಿಸ್ಥಿತಿಯಲ್ಲಿ ಕೆಲಸ ಮಾಡುವಂತಹ ಸ್ಥಿತಿಯಿದೆ ಎಂದು ಅಳಲು ತೋಡಿಕೊಂಡ ಸಚಿವರು, “ಕೆಲವರು ಇದು ವೆಚ್ಚ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ವಿರೋಧಿಸಿದ್ದಾರೆ, ಆದರೆ ಟ್ರಕ್ ಡ್ರೈವರ್‌ಗಳಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ದೀರ್ಘಕಾಲದವರೆಗೆ ಮಾಡುವಂತೆ ಸೂಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement