ದೆಹಲಿ ಮದ್ಯ ಹಗರಣ : ದೆಹಲಿ ಮಾಜಿ ಸಿಎಂ ಮನೀಶ ಸಿಸೋಡಿಯಾ, ಇತರರಿಂದ 52 ಕೋಟಿ ಮೌಲ್ಯದ ಆಸ್ತಿ ವಶ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ, ಅವರ ಪತ್ನಿ ಸೀಮಾ ಸಿಸೋಡಿಯಾ ಮತ್ತು ಇತರರಿಂದ 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಶಪಡಿಸಿಕೊಂಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮನೀಶ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಅಪರಾಧವು ಗಂಭೀರ ಸ್ವರೂಪದ್ದಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ.
ಇ.ಡಿ. ಪ್ರಕಾರ, ಆಸ್ತಿಯಲ್ಲಿ ಮನೀಶ ಸಿಸೋಡಿಯಾ ಅವರ ಬ್ಯಾಂಕ್ ಬ್ಯಾಲೆನ್ಸ್ 11.49 ಲಕ್ಷ ರೂ., ಬ್ರಿಂಡ್ಕೊ ಸೇಲ್ಸ್ ಪ್ರೈ. ಲಿಮಿಟೆಡ್ (16.45 ಕೋಟಿ ರೂ.) ಮತ್ತು ಇತರರು ಎಂದು ಸುದ್ದಿ ಸಂಸ್ಥೆ ವರದಿ ಹೇಳಿದೆ.
ಮನೀಶ ಸಿಸೋಡಿಯಾ ಮತ್ತು ಅವರ ಪತ್ನಿಯ ಎರಡು ಆಸ್ತಿಗಳು, ರಾಜೇಶ್ ಜೋಶಿ ಮತ್ತು ಗೌತಮ್ ಮಲ್ಹೋತ್ರಾ ಅವರ ಆಸ್ತಿಯನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೊರಡಿಸಲಾದ ತಾತ್ಕಾಲಿಕ ಆದೇಶ ತಿಳಿಸಿದೆ.
ಹಲವು ಸುತ್ತಿನ ವಿಚಾರಣೆಯ ನಂತರ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಫೆಬ್ರವರಿ 26 ರಂದು ಮನೀಶ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಪ್ರಸ್ತುತ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆ ನಡೆಸುತ್ತಿವೆ.
ನೀತಿಯನ್ನು ನಂತರ ರದ್ದುಗೊಳಿಸಲಾಯಿತು ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಶಿಫಾರಸು ಮಾಡಿದರು, ನಂತರ ಇ.ಡಿ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತು.

ಪ್ರಮುಖ ಸುದ್ದಿ :-   ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement