ನಾಪತ್ತೆಯಾಗಿದ್ದ ಜೈನಮುನಿಗಳ ದೇಹ ತುಂಡು ತುಂಡು ಮಾಡಿ ಬೋರ್​ವೆಲ್​ ಗೆ ಎಸೆದಿದ್ದ ಹಂತಕರು : ಶವದ ತುಂಡುಗಳು ಪತ್ತೆ

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಮೂಟೆಕಟ್ಟಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿಪರ್ವತ ಆಶ್ರಮ ಜೈನಮುನಿ ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ನಂತರ ಅವರನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದ ನಂತರ ಅವರ ಮೃತದೇಹಕ್ಕಾಗಿ ಭಾರಿ ಹುಡುಕಾಟ ನಡೆದಿತ್ತು. ಇಂದು ಶನಿವಾರ ಸ್ವಾಮೀಜಿಯ ಶವ ಪತ್ತೆಯಾಗಿದೆ. ಅವರ ದೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಲಾಗಿದ್ದು, ಶವದ ತುಂಡುಗಳನ್ನು ಬೋರ್​ವೆಲ್​ನೊಳಕ್ಕೆ ಎಸೆಯಲಾಗಿತ್ತು.
ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಶ್ರೀಗಳನ್ನು ಹಣದ ವಿಚಾರವಾಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಕೊಳವೆಬಾವಿಗೆ ಮೃತದೇಹ ಎಸೆದಿದ್ದರು. ಪ್ರಕರಣ ಸಂಬಂಧ ನಿನ್ನೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಶ್ರೀಗಳನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಖಟಕಬಾವಿ ಗದ್ದೆ ಬಳಿ  ಕೊಳವೆಬಾವಿಗೆ ಎಸೆದಿರುವುದಾಗಿ ಬಾಯ್ಬಿಟ್ಟಿದ್ದರು ಎಂದು ಹೇಳಲಾಗಿದೆ. ತಲೆ ಭಾಗ, ಹೊಡೆಯ ಭಾಗ ಹಾಗೂ ಕೈಕಾಲುಗಳ ಭಾಗಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ವೈದ್ಯರು ಸ್ಥಳಕ್ಕೆ ಆಗಮಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕುಮಟಾ : ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ಪಂ.ಗಣಪತಿ ಭಟ್ಟ ಹಾಸಣಗಿಗೆ ʼಸೌರಭ ರಾಷ್ಟ್ರೀಯ ಸಮ್ಮಾನ್‌ʼ ಪ್ರದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement