ಭಾರೀ ಮಳೆಯಿಂದಾಗಿ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ : ಸಂಕಷ್ಟದಲ್ಲಿ ಸಿಲುಕಿರುವ 80 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ ಸುಮಾರು 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ.
ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವೀಡಿಯೊ ಮೂಲಕ ಪ್ರಧಾನಿ ಮೋದಿಗೆ ಅವರು ಮನವಿ ಮಾಡಿದ್ದಾರೆ.
ಗದಗ ಜಿಲ್ಲೆಯ ವಿವಿಧ ಗ್ರಾಮಗಳು ಸೇರಿದಂತೆ ಕಾರ್ನಟಕದ ಸುಮಾರು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ಬರುವ ವೇಳೆ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿದು ಸಂಪರ್ಕ ಕಡಿತಗೊಂಡಿದೆ. ಸದ್ಯ ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದಿರುವ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ.
ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತದ ಕಾರಣದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಎರಡು ದಿನಗಳಿಂದ ಸ್ಥಗಿತಗೊಳಿಸಲಾಗಿದೆ. ಬೇಸ್ ಕ್ಯಾಂಪ್ ಗಳಲ್ಲಿ ಕನ್ನಡಿಗರು ಸೇರಿದಂತೆ ಸುಮಾರು 50,000 ಯಾತ್ರಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ.
ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ ಅವರಿಗೆ ಕನ್ನಡಿಗರ ರಕ್ಷಣೆಯ ಜವಾಬ್ದಾರಿ ವಹಿಸಲಾಗಿದೆ. ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement