ರಾಷ್ಟ್ರೀಯ ಕಾರ್ಯಕಾರಿಣಿಗೆ ನೂತನವಾಗಿ 10 ಸದಸ್ಯರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪಕ್ಷದ 10 ನಾಯಕರನ್ನು ನಾಮನಿರ್ದೇಶನ ಮಾಡಿದ್ದಾರೆ.
ಹೊಸ ರಾಷ್ಟ್ರೀಯ ಕಾರ್ಯಕಾರಿಣಿಗೆ ತೆಲಂಗಾಣ, ಜಾರ್ಖಂಡ್, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಿಂದ ಕ್ರಮವಾಗಿ ಬಿಜೆಪಿಯ ಮಾಜಿ ಅಧ್ಯಕ್ಷರಾದ ಬಂಡಿ ಸಂಜಯಕುಮಾರ, ದೀಪಕ ಪ್ರಕಾಶ, ಸತೀಶ ಪುನಿಯಾ ಮತ್ತು ಸಂಜಯ ಜೈಸ್ವಾಲ್ ಎಂದು ಪಕ್ಷದ ಹೇಳಿಕೆ ತಿಳಿಸಿದೆ.
ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ಪಂಜಾಬ್‌ನಲ್ಲಿ ಕ್ರಮವಾಗಿ ಸುರೇಶ ಕಶ್ಯಪ, ವಿಷ್ಣುದೇವ ಸಾಯಿ ಮತ್ತು ಅಶ್ವನಿ ಶರ್ಮಾ ನೇಮಕಗೊಂಡವರಲ್ಲಿ ಸೇರಿದ್ದಾರೆ. ಛತ್ತೀಸ್‌ಗಢದ ಬಿಜೆಪಿ ನಾಯಕ ಧರ್ಮಲಾಲ ಕೌಶಿಕ್, ಆಂಧ್ರಪ್ರದೇಶ ಬಿಜೆಪಿ ಮಾಜಿ ಅಧ್ಯಕ್ಷ ಸೋಮು ವೀರರಾಜು ಮತ್ತು ರಾಜಸ್ಥಾನದ ನಾಯಕ ಕಿರೋಡಿ ಲಾಲ್ ಮೀನಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಗೆ ನೇಮಕ ಮಾಡಲಾಗಿದೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.
ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement