ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾನುವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇದೆ. ನಂತರ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿ ಜುಲೈ 13 ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕೊಡಗು ಜಿಲ್ಲೆಗೆ ಜುಲೈ 9ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement