ಟೊಮೆಟೊ ಬೆಲೆ ಗಗನಕ್ಕೆ: ಟೊಮೆಟೊ ತುಂಬಿದ್ದ ವಾಹನವನ್ನೇ ಕದ್ದೊಯ್ದ ಕಳ್ಳರು…!

ಬೆಂಗಳೂರು : ಟೊಮೆಟೊ ಬೆಲೆ ಗಗನಕ್ಕೇರಿದ್ದು, ಹೀಗಾಗಿ ಟೊಮೆಟೊ ತುಂಬಿದ್ದ ವಾಹನವನ್ನೇ ಕಳ್ಳತನ ಮಾಡಿದ ಘಟನೆ ವರದಿಯಾಗಿದೆ.
ಟೊಮೆಟೊ ಪ್ರತಿ ಕೇಜಿಗೆ 110 ರೂ. ದಾಟಿದೆ. ಈ ಹಿನ್ನೆಲೆ ಜನರು ಟೊಮೆಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಟೊಮೆಟೊ ಬೆಲೆ ಶತಕ ದಾಟಿದ ನಂತರ ಟೊಮೆಟೊಗಳನ್ನು ಹೊಲದೀಂದ ಕಳ್ಳತನ ಮಾಡಿದ ಘಟನೆಗಳು ಹೀಗಾಗಿ ಟೊಮೆಟೊ ಬೆಳೆಗಾರರು ಜಮೀನುಗಳಿಗೆ ಕಾವಲು ಕಾಯುತ್ತಿದ್ದಾರೆ. ಆದರೆ ಈಗ ರೈತನ ಟೊಮೆಟೊ ತುಂಬಿದ್ದ ವಾಹನವನ್ನೇ ಕಳ್ಳತನ ಮಾಡಿದ ಘಟನೆ ವರದಿಯಾಗಿದೆ. ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಪ್ರಕರಣದಲ್ಲಿ ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನೇ ಖದೀಮರು ಕದ್ದೊಯ್ದಿದ್ದಾರೆ.
ಶನಿವಾರ ಬೆಳಿಗ್ಗೆ ರೈತ ಹಿರಿಯೂರಿನಿಂದ ಕೋಲಾರಕ್ಕೆ ಟೊಮೆಟೊ ಸಾಗಿಸುತ್ತಿದ್ದರು. ಇದನ್ನು ಕಂಡ ಮೂವರು ಕಾರಿನಲ್ಲಿ ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.
ನಂತರ ಆರ್​​ಎಂ​​ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ರೈತನ ಬೊಲೆರೊ ವಾಹನವನ್ನು ಅಡ್ಡಗಟ್ಟಿದ್ದಾರೆ. ಪೀಣ್ಯಾ ಬಳಿ ನಂತರ ನಮ್ಮ ಕಾರಿಗೆ ನಿಮ್ಮ ವಾಹನದಿಂದ ಡಿಕ್ಕಿ ಹೊಡೆದಿದೀರಿ ಚಾಲಕ ​ಮತ್ತು ರೈತನಿಗೆ ಅವಾಜ್ ಹೆದರಿಸಿ ಹಲ್ಲೆ ಮಾಡಿದ್ದಾರೆ. ಬಳಿಕ ಹಣ ಕೊಡು ಎಂದಿದ್ದಾರೆ. ಹಣ ಇಲ್ಲ ಎಂದಾಗ ಮೊಬೈಲ್​ನಲ್ಲಿದ್ದ ಹಣ ಟ್ರಾನ್ಸಫರ್ ಮಾಡಿ ಎಂದು ಹಣ ದೋಚಿದ್ದಾರೆ. ನಂತರ ಬೊಲೊರೋದಲ್ಲಿದ್ದ ಟೊಮೆಟೊ ನೋಡಿದ್ದಾರೆ. ನಂತರ ಬೊಲೊರೋ ಸಮೇತ ರೈತ ಮತ್ತು ಚಾಲಕನನ್ನು ಕರೆದುಕೊಂಡು ಚಿಕ್ಕಜಾಲ ತನಕ ಹೋಗಿದ್ದಾರೆ. ಚಿಕ್ಕಜಾಲ ಬಳಿ ರೈತನನ್ನು ಬಿಟ್ಟು ಚಾಲಕ ಮತ್ತು ಟೊಮೆಟೊ ತುಂಬಿದ್ದ ವಾಹನ ಸಮೇತ ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಮುಖ ಸುದ್ದಿ :-   ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement