ಮೋದಿ’ ಉಪನಾಮʼ ಹೇಳಿಕೆ : ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಮೇಲ್ಮನವಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗುವ ಮೇಲ್ಮನವಿ ವಿರುದ್ಧ ಕೇವಿಯಟ್‌ (ತಡೆ ಅರ್ಜಿ) ಸಲ್ಲಿಕೆಯಾಗಿದೆ.
ಗುಜರಾತ್‌ ಶಾಸಕ ಪೂರ್ಣೇಶ ಮೋದಿ ಈ ಅರ್ಜಿ ಸಲ್ಲಿಸಿದ್ದು, ರಾಹುಲ್‌ ಗಾಂಧಿ ಅವರ ವಿರುದ್ಧ ಮೋದಿ ಉಪನಾಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರ ಸಂಬಂಧ ದಾಖಲಾದ ಮಾನಹಾನಿ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ಹಾಗೂ ಗುಜರಾತ್‌ ಹೈಕೋರ್ಟ್‌ ಶಿಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.
ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್‌ ಹೇಳಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಪೂರ್ಣೇಶ ಮೋದಿ ಕೇವಿಯಟ್ ಸಲ್ಲಿಸಿದ್ದು ಪ್ರಕರಣದ ಸೂಕ್ತ ವಿಚಾರಣೆ ಆಲಿಸಿ ತೀರ್ಪು ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಗುಜರಾತ್ ಹೈಕೋರ್ಟ್ ತೀರ್ಪು ಪ್ರಕಟವಾದ ದಿನದಂದೇ ಅವರು ತಮ್ಮ ವಕೀಲರ ಮೂಲಕ ಕೇವಿಯಟ್ ಸಲ್ಲಿಸಿದ್ದಾರೆ. ಯಾವುದೇ ಆದೇಶವನ್ನು ನೀಡುವ ಮೊದಲು ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಬೇಕೆಂದು ಕೇವಿಯಟ್‌ನಲ್ಲಿ ಮನವಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಜಾಲತಾಣ ಹೇಳಿದೆ.
ಮೋದಿ ಉಪನಾಮದ ಕುರಿತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜುಲೈ 7ರಂದು ಗುಜರಾತ್‌ ಹೈಕೋರ್ಟ್‌ನ ಏಕ ಸದಸ್ಯ ಪೀಠ ರಾಹುಲ್ ಮನವಿಯನ್ನು ತಿರಸ್ಕರಿಸಿತ್ತು.

ಪ್ರಮುಖ ಸುದ್ದಿ :-   ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement