ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ : ಬಿಜೆಪಿ ನಾಯಕ ಸಾವು, ಹಲವರಿಗೆ ಗಾಯ

ಪಾಟ್ನಾ: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಬಿಜೆಪಿ ನಾಯಕರೊಬ್ಬರು ಸಾವಿಗೀಡಾಗಿದ್ದಾರೆ.
ವಿವರಗಳ ಪ್ರಕಾರ, ಬಿಜೆಪಿ ಮುಖಂಡ ವಿಜಯಕುಮಾರ ಸಿಂಗ್ ಎಂದು ಗುರುತಿಸಲಾಗಿದ್ದು, ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಪ್ರತಿಭಟನೆ ವೇಳೆ ಸಾವಿಗೀಡಾಗಿದ್ದಾರೆ.
ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಈ ಮಾಹಿತಿಯನ್ನು ರಾಜ್ಯಸಭಾ ಸಂಸದ ಸುಶೀಲಕುಮಾರ ಮೋದಿ ದೃಢಪಡಿಸಿದ್ದು, ಟ್ವಿಟರ್‌ನಲ್ಲಿ ಅವರು ಬಿಜೆಪಿ ನಾಯಕ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಹಾರ ವಿಧಾನಸಭೆಯತ್ತ ಪಾದಯಾತ್ರೆ ನಡೆಸುತ್ತಿದ್ದಾಗ ಪಾಟ್ನಾದಲ್ಲಿ ಹಲವಾರು ಇತರ ನಾಯಕರ ಮೇಲೆ ಗುರುವಾರ ಲಾಠಿಚಾರ್ಜ್ ಮಾಡಲಾಯಿತು. ಪ್ರತಿಭಟನಾ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದರು.

ಪೊಲೀಸರು ಮಹಾರಾಜ್‌ಗಂಜ್‌ನ ಬಿಜೆಪಿ ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲ್ ಅವರ ಮೇಲೆಯೂ ಲಾಠಿ ಚಾರ್ಜ್‌ ನಡೆಸಿದ್ದು ಅವರ ತಲೆಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಅನೇಕ ಪ್ರತಿಭಟನಾಕಾರರಿಗೂ ಗಾಯಗಳಾಗಿವೆ.
ಡಾಕ್ ಬಂಗಲೆ ಕ್ರಾಸಿಂಗ್‌ನಲ್ಲಿ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಪರಿಸ್ಥಿತಿ ಉಲ್ಬಣಗೊಳಿಸಿತು. ನಿರ್ಬಂಧಿತ ವಿಐಪಿ ಪ್ರದೇಶಕ್ಕೆ ತೆರಳಲು ಯತ್ನಿಸಿದಾಗ ಪ್ರತಿಭಟನಾಕಾರರನ್ನು ತಡೆಯಬೇಕಾಯಿತು ಎಂದು ಪೊಲೀಸರು ತಿಳಿಸಿದ್ದರು. ಪೊಲೀಸರ ಪ್ರಕಾರ, ಪ್ರತಿಭಟನಾಕಾರರು ಕ್ರಾಸಿಂಗ್‌ನಲ್ಲಿ ಸಂಚಾರವನ್ನು ನಿರ್ಬಂಧಿಸಿದರು, ಇದು ಲಾಠಿಚಾರ್ಜ್‌ಗೆ ಕಾರಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಶೆಲ್‌ಗಳನ್ನು ಸಹ ಬಳಸಿದರು.

ಪ್ರಮುಖ ಸುದ್ದಿ :-   'ಮೋಸ್ಟ್ ವಾಂಟೆಡ್' ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

ಘಟನೆಯ ನಂತರ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಟ್ವಿಟರ್‌ನಲ್ಲಿ “ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ರಾಜ್ಯ ಸರ್ಕಾರದ ವೈಫಲ್ಯ ಮತ್ತು ಅದಕ್ಷತೆಯ ಪರಿಣಾಮವಾಗಿದೆ” ಎಂದು ಹೇಳಿದ್ದಾರೆ.
“ಭ್ರಷ್ಟಾಚಾರದ ಕೋಟೆಯನ್ನು ರಕ್ಷಿಸುವ ಸಲುವಾಗಿ ಮಹಾಘಟಬಂಧನ (ಮಹಾಮೈತ್ರಿಕೂಟ) ಸರ್ಕಾರವು ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ. ಬಿಹಾರದ ಮುಖ್ಯಮಂತ್ರಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು ನೈತಿಕತೆಯನ್ನು ಮರೆತಿದ್ದಾರೆ,” ಎಂದು ನಡ್ಡಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಮುಖಂಡ ಸುಶೀಲಕುಮಾರ ಮೋದಿ ಅವರು ಪಕ್ಷದ ನಾಯಕನ ಸಾವಿನ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ವಿರುದ್ಧ ವಾಗ್ದಾಳಿ ನಡೆಸಿದರು.

ಪೊಲೀಸರ ಲಾಠಿ ಚಾರ್ಜ್‌ನಿಂದ ನಮ್ಮ ಪಕ್ಷದ ಸದಸ್ಯರೊಬ್ಬರು ಸಾವಿಗೀಡಾಗಿರುವುದು ದುರದೃಷ್ಟಕರ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಪೊಲೀಸರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸುತ್ತೇವೆ. ಇದಕ್ಕೆಲ್ಲಾ ನಿತೀಶಕುಮಾರ ಕಾರಣ’ ಎಂದು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಹೇಳಿದ್ದಾರೆ.
ಇದೇ ವೇಳೆ ಬಿಹಾರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಮುಂದಿನ ವಾರದವರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ರಜೆ ಮೇಲೆ ನಿಷೇಧ ಹೇರಿದೆ. ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳ ರಜೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶ ಹೇಳಿದೆ.
ವಿಶೇಷ ಸಂದರ್ಭಗಳಲ್ಲಿ ರಜೆ ಪಡೆಯಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪ ಕಾರ್ಯದರ್ಶಿ ಕೆ.ಕೆ ಪಾಠಕ್ ಅವರಿಂದ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ : ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement