ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುವ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪವಾದಾಗ ಮಧ್ಯಪ್ರವೇಶ ಮಾಡಿದ ಕುಮಾರಸ್ವಾಮಿ, “ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಯವರೇ ನೀವು ಜೊತೆ ಸೇರಿಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಕುಮಾರಸ್ವಾಮಿ , “ ಪ್ರಧಾನಿ ನರೇಂದ್ರ ಮೋದಿ‌ ಅವರು 2019ರಲ್ಲಿ ನನ್ನ ಜೊತೆ ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಅವರ ಮಾತು ಕೇಳಿದಿದ್ದರೆ ಐದು ವರ್ಷ ನಾನು ರಾಜ್ಯದ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬುದು ತಿಳಿದಿರಲಿ ಎಂದು ತಿರುಗೇಟು ನೀಡಿದರು.
ಪದೇ ಪದೇ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಈ ವಿಚಾರ ತಿಳಿದುಕೊಳ್ಳಿ. ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ, ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಮುಖ್ಯಮಂತ್ರಿ ಆಗಿರುತ್ತಿದ್ದೆ. ಆದರೆ ನಾನು ಆ ಪ್ರಸ್ತಾಪ ತಿರಸ್ಕಾರ ಮಾಡಿದೆ‌. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ ಜೊತೆ ಮೈತ್ರಿಯಲ್ಲೇ ಮುಂದುವರಿದೆ‌ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement