ರಾಜ್ಯದ ಈ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳು ವಿಶ್ರಾಂತಿ ನೀಡಿದ್ದ ಮಳೆ ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಮತ್ತೆ ಚುರುಕು ಪಡೆಯಲಿದೆ ಎಂದು ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣದ ಒಳನಾಡಿನಲ್ಲಿ ಬುಧವಾರ ಹಾಗೂ ಗುರುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು , ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.
ಕರಾವಳಿ, ದಕ್ಷಿಣದ ಒಳನಾಡಿನಲ್ಲಿ ಬುಧವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ ಸರಾಸರಿ 40-45 ಕಿಮೀ ವೇಗದಲ್ಲಿ ಗರಿಷ್ಠ 55 ಕಿಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೆ, ಮಲೆನಾಡಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೂ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಬೀದರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಜ್ಯದ ಹಲವೆಡೆ ಜುಲೈ 19ರವರೆಗೂ ಮಳೆ ಆಗಬಹುದು. ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement