ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ನಂತರ ರಾಹುಲ್‌ ಗಾಂಧಿ ಲೊಕಸಬಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. “ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?” ಎಂದು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಡಿದ ಹೇಳಿಕೆ ನೀಡಿದ ನಂತರ ಅವರ ವಿರುದ್ಧ ಗುಜರಾತ್‌ ಶಾಸಕ ಪೂರ್ಣೇಶ ಮೋದಿ ಅವರು ಮಾನನಷ್ಟ ಪ್ರಕರಣದ ದಾಖಲಿಸಿದ್ದರು.
ಗುಜರಾತ್‌ ನ್ಯಾಯಾಲಯ ನೀಡಿರುವ ಎರಡು ವರ್ಷ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸೆಷನ್ಸ್ ನ್ಯಾಯಾಲಯ ಅಥವಾ ಗುಜರಾತ್ ಹೈಕೋರ್ಟ್‌ನಿಂದ ಯಾವುದೇ ಮಧ್ಯಂತರ ತಡೆ ಸಿಕ್ಕಿಲ್ಲ. ದೂರುದಾರರಾಗಿರುವ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದಾರೆ.
ರಾಜಕೀಯದಲ್ಲಿ ಪರಿಶುದ್ಧತೆ ಹೊಂದುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದ ಗುಜರಾತ್‌ ಹೈಕೋರ್ಟ್ ರಾಹುಲ್‌ ಗಾಂಧಿಯವರ ಮನವಿ ವಜಾಗೊಳಿಸಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement