ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟಿದ್ದಾನೆ ಎನ್ನಾಗಿದೆ. ಮನೆಯವರು ಬಂದು ನೋಡಿದಾಗ ಉಯ್ಯಾಲೆ ಆಟವಾಡುತ್ತಿದ್ದ ಬಾಲಕ ನೆಲದಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇದನ್ನು ನೋಡಿದ ತಂಗಿ ಮನೆಯವರಿಗೆ ತಿಳಿಸಿದ ನಂತರ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement