ಬಿಜೆಪಿ ಬಿಡುವ ವದಂತಿ: ತೇಜಸ್ವಿನಿ ಅನಂತಕುಮಾರ ಹೇಳಿದ್ದೇನು ?

ಬೆಂಗಳೂರು : ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಮ್ಮ ಬಗ್ಗೆ ಎದ್ದಿರುವ ಊಹಾಪೋಹಾಗಳಿಗೆ ಈಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಸ್ವತಃ ತೆರೆ ಎಳೆದಿದ್ದಾರೆ.
ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, I am wedded to the party and ideology – no compromise ” ಎಂದು ಟ್ವೀಟ್ ಮಾಡುವ ಮೂಲಕ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವರು ಹಾಗೂ ಬಿಜೆಪಿಯ ರಾಷ್ಟ್ರೀಯ ನಾಯಕರಾಗಿದ್ದ ದಿ. ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಕಾಂಗ್ರೆಸ್ ಸೇರಲಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿಯೊಬ್ಬರು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂಬೆಲ್ಲ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಲೋಕಸಭೆ ಚುನಾವಣೆ ಮುಂದಿನ ವರ್ಷವೇ ಇರುವ ಕಾರಣ ಈ ಪೋಸ್ಟ್‌ ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಊಹಾಪೋಹಗಳಿಗೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಈಗ ಟ್ವೀಟ್‌ ಮೂಲಕ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆಯೂ ಅವರು, ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂಬ ಟ್ವೀಟ್ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement