ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 17ರಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಹಾಗೂ ಜುಲೈ 20ರಂದು ಆರೇಂಜ್‌ ಅಲರ್ಟ್‌ ಘೋಷಿಸಿದೆ.
ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನಾಂಕ ಜುಲೈ 19 ಮತ್ತು 20 ರಂದು2 ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ ಮತ್ತು ಕಲಬುರಗಿ ಜಿಲ್ಲೆಗಳಿಗೆ ದಿನಾಂಕ ಜುಲೈ 19 ಮತ್ತು 20 ರಂದು ಭಾರಿ ಮಳೆಯಾಗಲಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement