ಗೃಹಲಕ್ಷ್ಮೀ ಯೋಜನೆ ಅರ್ಜಿ ಫಾರಂ ಬಿಡುಗಡೆ ಮಾಡಿಲ್ಲ, ಹರಿದಾಡುತ್ತಿರುವುದು ನಕಲಿ ಅರ್ಜಿ : ಸಚಿವೆ ಹೆಬ್ಬಾಳ್ಕರ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳು ಹರಿದಾಡುತ್ತಿವೆ. ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನಕಲಿ ಅರ್ಜಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ . ಈ ಯೋಜನೆಗೆ ಸಂಬಂಧಿಸಿದಂತೆ ಗ್ರಾಹಕರು ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಲೂರು ಒನ್‌ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಹಾಗೂ ಪ್ರಜಾಪ್ರತಿನಿಧಿಗಳಲ್ಲಿ ಮಾತ್ರ ಈ ಯೋಜನೆಗೆ ನೋಂದಾಯಿಸಬೇಕು ಎಂದು ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement