ಬಂಧಿತ ಐವರು ಶಂಕಿತ ಉಗ್ರರು ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು, ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು : ಪೊಲೀಸರು

ಬೆಂಗಳೂರು : ನಗರದಾದ್ಯಂತ ದಾಳಿ ನಡೆಸಲು ಯೋಜಿಸಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ.
ಆರೋಪಿಗಳಲ್ಲಿ ಒಬ್ಬ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಮೊಬೈಲ್‌ ಫೋನ್‌ಗಳ ಜೊತೆಗೆ ಹಲವಾರು ಸ್ಫೋಟಕ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿರುವುದರಿಂದ, ಯೋಜನೆಯಲ್ಲಿ ಭಾಗಿಯಾಗಿರುವ ಶಂಕೆ ಮೇಲೆ ಇನ್ನೂ ಐದು ವ್ಯಕ್ತಿಗಳ ಹುಡುಕಾಟದಲ್ಲಿ ಸಿಸಿಬಿ ತೊಡಗಿದೆ.
ಬಂಧಿತ ಐವರು ಆರೋಪಿಗಳು 2017ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು, ಅಲ್ಲಿ ಅವರು ಕೆಲವು ಭಯೋತ್ಪಾದಕರ ಸಂಪರ್ಕಕ್ಕೆ ಬಂದರು ಮತ್ತು ಸ್ಫೋಟಕಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ಪಡೆದರು.
ನಗರದಲ್ಲಿ ಸ್ಫೋಟದ ಯೋಜನೆ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.
ನಂತರ, ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಪೊಲೀಸರು, ಬಂಧಿತ ಆರೋಪಿಗಳಲ್ಲಿ ಒಬ್ಬ ಈ ಹಿಂದೆ 2017 ರ ಕೊಲೆ ಪ್ರಕರಣದಲ್ಲಿ 18 ತಿಂಗಳ ಕಾಲ ಜೈಲಿನಲ್ಲಿದ್ದ. ಜೈಲಿನಲ್ಲಿ ಕೆಲವು ಅಪರಾಧಿಗಳ ಸಂಪರ್ಕಕ್ಕೆ ಬಂದಿದ್ದ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನದಂ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

ಈ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಬೆಂಗಳೂರಿನ ಪೊಲೀಸ್ ಆಯುಕ್ತ ಬಿ ದಯಾನಂದ ಅವರು, ಬಂಧಿತ ಆರೋಪಿಗಳು ಲಷ್ಕರ್-ಎ-ತೊಯ್ಬಾ ಉಗ್ರನೊಂದಿಗೆ ನಂಟು ಹೊಂದಿದ್ದಾರೆ. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜಿಸಿದ್ದವರನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಯಶಸ್ವಿಯಾಗಿದೆ. ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಏಳು ಪಿಸ್ತೂಲ್‌ಗಳು, ಹಲವು ಜೀವಂತ ಗುಂಡುಗಳು, ವಾಕಿ-ಟಾಕಿ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಅವರು ಹೇಳಿದರು. ತಲೆಮರೆಸಿಕೊಂಡಿರುವ ಆರೋಪಿಗಳಲ್ಲಿ ಒಬ್ಬ ಕೆಲವು ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಬಂಧಿತರಿಗೆ ಈ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ ಎಂದು ಅವರು ಹೇಳಿದರು.
ಇದೇ ವೇಳೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಸಿಬಿ ಉತ್ತಮ ಕೆಲಸ ಮಾಡಿದೆ ಎಂದು ಹೇಳಿದರು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೊಡ್ಡ ಸಂಚು ಇದೆ, ಅವರು ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ಮಾಡಲು ಬಯಸಿದ್ದರು, ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಬೇಕು” ಎಂದು ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement