ನವದೆಹಲಿ : ಈ ವರ್ಷದಿಂದ ಅತ್ಯುತ್ತಮ ವೆಬ್ ಸರಣಿ ತಯಾರಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಪ್ರಕಟಿಸಿದ್ದಾರೆ.
ನವೆಂಬರ್ 20 ರಿಂದ ನಡೆಯಲಿರುವ ಗೋವಾ ಚಿತ್ರೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಮೂಲತಃ ಭಾರತೀಯ ಭಾಷೆಯಲ್ಲಿ ಚಿತ್ರೀಕರಿಸಲಾದ ಮೂಲ ವೆಬ್ ಸರಣಿಗೆ ಪ್ರಶಸ್ತಿ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಶಸ್ತಿಯು ಭಾರತದ ಒಟಿಟಿ (OTT) ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಉತ್ತೇಜಿಸಲು ಮತ್ತು ಭಾರತೀಯ ಭಾಷೆಗಳಲ್ಲಿ ಸರಣಿ ಮಾಡಲು, , ಪ್ರೋತ್ಸಾಹಿಸಲು, ಅಸಾಧಾರಣ ಪ್ರತಿಭೆಯನ್ನು ಗುರುತಿಸಲು ಮತ್ತು OTT ಉದ್ಯಮದ ಬೆಳವಣಿಗೆ ಮತ್ತು ಆವಿಷ್ಕಾರವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ವರ್ಷದಿಂದ 54 ನೇ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ವಾರ್ಷಿಕವಾಗಿ ಪ್ರಸ್ತುತಪಡಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ.
IFFI 2023 ನವೆಂಬರ್ 20 ರಿಂದ ನವೆಂಬರ್ 28 ರವರೆಗೆ ನಡೆಯಲಿದೆ
ನಿಮ್ಮ ಕಾಮೆಂಟ್ ಬರೆಯಿರಿ