ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಹೈಡ್ರಾಮಾದ ವೇಳೆ ಅಸ್ವಸ್ಥರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal Health) ಆರೋಗ್ಯ ಸ್ಥಿರವಾಗಿದೆ.
ಈ ಕುರಿತು ಸ್ವತಃ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಟ್ವೀಟ್ ಮಾಡಿದ್ದು, ನಾನು ಸಂಪೂರ್ಣ ಗುಣಮುಖನಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಜೈ ಶ್ರೀರಾಮ ಎಂದು ಅದರಲ್ಲಿ ಬರೆದಿದ್ದಾರೆ.
ಬಸವನಗೌಡ ಪಾಟೀಲ್ ಯತ್ನಾಳ್ ಅವರ ಇಸಿಜಿ, ಎಕೋ ನಾರ್ಮಲ್ ಇದೆ. 24 ಗಂಟೆ ಐಸಿಯುನಲ್ಲಿ ನಿಗಾದಲ್ಲಿರಬೇಕು. ಬಿಪಿ ಹೆಚ್ಚಿದೆ, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪ್ರಮುಖ ಪ್ಯಾರಮೀಟರ್ಸ್ (Vital Parameters) ಸ್ಥಿರವಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಬಸವನಗೌಡ ಪಾಟೀಲ ಯತ್ನಾಳ್ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಪತ್ನಿ ಶೈಲಜಾ ಹಾಗೂ ಪುತ್ರ ಆಸ್ಪತ್ರೆಗೆ ಆಗಮಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭೇಟಿ:
ತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅವರ ಜೊತೆಗೆ ಸ್ಪೀಕರ್ ಯು.ಟಿ.ಖಾದರ್ ಸಹ ಇದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಅರವಿಂದ ಬೆಲ್ಲದ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ ಅವರ ಆರೋಗ್ಯ ವಿಚಾರಿಸಿದರು.
ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದದ ನಂತರ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾರ್ಷಲ್‍ಗಳು ಅಮಾನತಾದ ಶಾಸಕರನ್ನು ಸದನದಿಂದ ಹೊರಹಾಕುವ ಕೆಲಸ ಮಾಡಿದರು. ಈ ವೇಳೆ ಶಾಸಕರು ವಿಧಾನಸಭೆಯ ಆವರಣದಲ್ಲಿ ಕುಸಿದು ಬಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗೆ ಅಂಬುಲೆನ್ಸ್‍ನಲ್ಲಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ