ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು, ಜುಲೈ 19ರಂದು ಈ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ.
ಅಲ್ಲದೆ ಕರಾವಳಿಯಲ್ಲಿ ಗಂಟೆಗೆ 40 ರಿಂದ 45 ಕಿ.ಮೀ ವೇಗದಲ್ಲಿ ಜೋರಾಗಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. .
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಸಿದ್ದಾಪುರ ತಾಲೂಕಿನ ನಿಲ್ಕುಂದ, ಸೂಪಾ ತಾಲೂಕಿನ ಕ್ಯಾಸಲ್ರಾಕ್ ಮತ್ತು ಸಿದ್ದಾಪುರ ತಾಲೂಕಿನ ಕೋಡ್ಕಣಿಯಲ್ಲಿ ಕ್ರಮವಾಗಿ 87, 81 ಮತ್ತು 77.5 ಮಿ.ಮೀ. ಮಳೆಯಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement