ಬೆಂಗಳೂರು : 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅಲ್ಲಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸ್ವೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನೋಟಿಸ್ ನೀಡಿವೆ.
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ.
ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾಗಿರುವ ಸಭಾಧ್ಯಕ್ಷರು ಸದನದ ವಿಶ್ವಾಸ ಕಳೆದುಕೊಂಡಿರುವ ಕಾರಣ ಅವರನ್ನು ಈ ಸ್ಥಾನದಿಂದ ತಅವರನ್ನು ಪದಚ್ಯುತಗೊಳಿಸಬೇಕು ಮತ್ತು 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಅನ್ವಯ ಅವಕಾಶ ನೀಡಬೇಕು ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಕೋರಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ