ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ನಾವು ಕೈಗೊಳ್ತೇವೆ : ಮಣಿಪುರದ ಬೆತ್ತಲೆ ಮೆರವಣಿಗೆ ಹೇಯಕೃತ್ಯದ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿದ ಘಟನೆಯನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ತೀವ್ರವಾಗಿ ಖಂಡಿಸಿದೆ ಮತ್ತು ದೃಶ್ಯಗಳು “ಸಾಂವಿಧಾನಿಕ ವೈಫಲ್ಯ” ವನ್ನು ತೋರಿಸಿದೆ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಆ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿದ್ದಾರೆ
ಸರ್ಕಾರ ಕ್ರಮಕೈಗೊಳ್ಳದಿದ್ದರೆ, ಸುಪ್ರೀಂ ಕೋರ್ಟ್ ಕೈಗೊಳ್ಳಲಿದೆ ಎಂದು ಮುಖ್ಯ ನ್ಯಾಯಮೂರ್ತಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೂ ಜುಲೈ 28 ರಂದು ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದ್ದಾರೆ.
“ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊಗಳ ಬಗ್ಗೆ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ನಮ್ಮ ತೀವ್ರವಾದ ಕಳವಳವನ್ನು ವ್ಯಕ್ತಪಡಿಸುತ್ತಿದ್ದೇವೆ. ಇದು ಸರ್ಕಾರ ಕ್ರಮ ಕೈಗೊಳ್ಳುವ ಸಮಯವಾಗಿದೆ. ಈ ಘಟನೆ ಸ್ವೀಕಾರಾರ್ಹವಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹೇಳಿದರು.
“ಸರ್ಕಾರವು ಕ್ರಮ ಕೈಗೊಳ್ಳದಿದ್ದರೆ, ನಾವು ಕೈಗೊಳ್ಳುತ್ತೇವೆ. ಇಂತಹ ಹಿಂಸಾಚಾರದ ಅಪರಾಧಿಗಳ ಬಗ್ಗೆ ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ಅದು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಮಾಧ್ಯಮಗಳು ಮತ್ತು ದೃಶ್ಯಗಳಲ್ಲಿ ಚಿತ್ರಿಸಿರುವುದು ಸಾಂವಿಧಾನಿಕ ಉಲ್ಲಂಘನೆಯನ್ನು ತೋರಿಸುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಪ್ರಮುಖ ಸುದ್ದಿ :-   ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ವ್ಯಾಪಕ ಖಂಡನೆ ವ್ಯಕ್ತವಾದ ವೀಡಿಯೊದಲ್ಲಿ, ಇಬ್ಬರು ಮಹಿಳೆಯರನ್ನು ಜನಸಮೂಹವು ಬೆತ್ತಲೆಯಾಗಿ ಮೆರವಣಿಗೆ ಮಾಡುವುದು ಕಂಡುಬರುತ್ತದೆ. ಅವರಿಗೆ ಕಿರುಕುಳ ನೀಡಿತು ಮತ್ತು ಗದ್ದೆಗೆ ಎಳೆದೊಯ್ದು, ಅಲ್ಲಿ ಅವರನ್ನು ಸಾಮೂಹಿಕ ಅತ್ಯಾಚಾರವೆಸಗಲಾಯಿತು ಎಂದು ಆರೋಪಿಸಲಾಗಿದೆ.
ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಹೇಳಿಕೆಯ ಪ್ರಕಾರ, ರಾಜ್ಯದ ರಾಜಧಾನಿ ಇಂಫಾಲ್‌ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಹೇಯಕೃತ್ಯದ ಘಟನೆ ನಡೆದಿದೆ.
ಈ ಭಯಾನಕ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡ ಒಂದು ದಿನದ ನಂತರ ಮಣಿಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹೆರಾದಾಸ್ (32) ಎಂಬಾತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ.
ಮೇ 3 ರಂದು ಮಣಿಪುರದಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈಥೆಯಿ ಸಮುದಾಯದ ಬೇಡಿಕೆ ವಿರೋಧಿಸಿ ಪ್ರತಿಭಟನೆ ನಡೆಸಲು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು.
ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕುಕಿ ಬುಡಕಟ್ಟು ಜನಾಂಗದವರು ಒತ್ತಾಯಿಸಿದ್ದಾರೆ. ಜನಾಂಗೀಯ ಹಿಂಸಾಚಾರದಲ್ಲಿ 120 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಈಗ ಅವರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ....!

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement