ಅಪಘಾತ ನೋಡಲು ಹೋದವರ ಮೇಲೆ ನುಗ್ಗಿದ ಕಾರು : ಪೊಲೀಸರು ಸೇರಿ 9 ಮಂದಿ ಸಾವು

ಅಹಮದಾಬಾದ್‌ :‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಡಿಕ್ಕಿ ಹೊಡೆದು ಪೊಲೀಸ್‌ ಸಿಬ್ಬಂದಿ ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ ಹತ್ತಾರು ಮಂದಿ ಜಮಾಯಿಸಿದ್ದರು, ಇದೇ ವೇಳೆ ಮತ್ತೊಂದು ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಜಾಗ್ವಾರ್‌ ಕಾರು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ ಏಕಾಏಕಿ ನುಗ್ಗಿದೆ, ಘಟನೆಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಒಟ್ಟು 12 ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಅದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜಾಗ್ವಾರ್ 160/kmph ವೇಗದಲ್ಲಿತ್ತು ಎಂದು ಹೇಳಲಾಗಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement