ಆಸ್ಪತ್ರೆಯಿಂದ ಬಸನಗೌಡ ಪಾಟೀಲ ಯತ್ನಾಳ ಡಿಸ್ಚಾರ್ಜ್‌

ಬೆಂಗಳೂರು : ವಿಧಾನಸಭೆಯಲ್ಲಿ ಬುಧವಾರ ನಡೆದ ಧರಣಿ – ಗಲಾಟೆ ವೇಳೆ ಅಸ್ವಸ್ಥರಾಗಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಾನು ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ಇನ್ನೆರಡು ದಿನಗಳಲ್ಲಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ತಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಅತಿರೇಕದ ವರ್ತನೆ ತೋರಿದ್ದಕ್ಕಾಗಿಸ್ಪೀಕರ್‌ ಯುಟಿ ಖಾದರ್‌ ಅವರು 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ನಿರ್ಧಾರದ ವಿರುದ್ಧ ಬಿಜೆಪಿ ಶಾಸಕರು ಧರಣಿ ನಡೆಸಿದ್ದರು. ಮಾರ್ಷಲ್‌ಗಳು ಅಮಾನತುಗೊಂಡ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕಲು ಪ್ರಯತ್ನಿಸಿದ್ದರು. ಈ ವೇಳೆ ಇತರ ಬಿಜೆಪಿ ಶಾಸಕರು ಅಮಾನತುಗೊಂಡ ಶಾಸಕರ ಪರವಾಗಿ ಧರಣಿ ಕುಳಿತಿದ್ದರು.

ಈ ವೇಳೆ ನೂಕಾಟದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಬಿಪಿ ಹೆಚ್ಚಾಗಿ ಅಸ್ವಸ್ಥರಾಗಿದ್ದರು. ವಿಧಾನಸೌಧದ ವೈದ್ಯರು ಉಪಚರಿಸಿದ್ದರು. ನಂತರ ಆಂಬುಲೆನ್ಸ್‌ ಮೂಲಕ ಬೆಂಗಳೂರಿನಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯುಟಿ ಖಾದರ್‌, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಮೊದಲಾದವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ನಾನು ಸಂಪೂರ್ಣ ಗುಣಮುಖನಾಗಿದ್ದೇನೆ. ಯಾರು ಭಯಪಡುವ ಅವಶ್ಯಕತೆಯಿಲ್ಲ. ಜೈ ಶ್ರೀರಾಮ ಎಂದು ತಮ್ಮ ಆರೋಗ್ಯದ ಬಗ್ಗೆ ಯತ್ಲಾಣ ಟ್ವೀಟ್‌ ಮಾಡಿದ್ದರು. ಈಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಪ್ರಮುಖ ಸುದ್ದಿ :-   ಸೆ.12ರಂದು ಚಂದಾವರ ಹನುಮಂತ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಪಠಣ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement