ಕೃಷಿ ವಿವಿಯಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ `ಗೌರವ ಡಾಕ್ಟರೇಟ್’ ಘೋಷಣೆ: ನಾಳೆ ಪ್ರದಾನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್‌ಸಿ ಜಗದೀಶ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದೆ. ಘಟಿಕೋತ್ಸವದಲ್ಲಿ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರಾದ ಥಾವರ್‌ ಚಂದ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಪ್ರದಾನ ಸಮಾರಂಭ ನಡೆಯಲಿದ್ದು, ಪದವೀಧರರಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಪಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರು 8ನೇ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement