ನವದೆಹಲಿ: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಎರಡು ದಿನಗಳ ಬಳಿ ಗುರುವಾರ ನರೇಂದ್ರ ಮೋದಿ (Narendra Modi) ಸೋನಿಯಾ ಗಾಂಧಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಲ್ಲಿ ೨೬ ವಿಪಕ್ಷಗಳ ಎರಡು ದಿನಗಳ ಚಿಂತನ ಮಂಥನ ಸಭೆಯ ನಂತರ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಬೆಂಗಲೂರಿನಿಂದ ದೆಹಲಿಗೆ ವಾಪಸಾಗುತ್ತಿದ್ದ ವೇಳೆ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನವನ್ನು ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.
ಈ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಾಯಿಯ ಫೋಟೋವನ್ನು ಹಂಚಿಕೊಂಡಿದ್ದರು. 76 ವರ್ಷದ ಸೋನಿಯಾ ಗಾಂಧಿ ವಿಮಾನದಲ್ಲಿ ಆಮ್ಲಜನಕದ ಮಾಸ್ಕ್ ಧರಿಸಿ ಕುಳಿತುಕೊಂಡಿರುವುದು ಆ ಫೋಟೋದಲ್ಲಿ ಕಂಡುಬಂದಿದೆ.
ಸಂಸತ್ತಿನ ಮುಂಗಾರು ಅಧಿವೇಶನ ಇಂದು, ಮಂಗಳವಾರದಿಂದ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಧಿವೇಶನದ ಮೊದಲ ದಿನವೇ ಸಂಸತ್ತಿಗೆ ಆಗಮಿಸಿದ್ದಾರೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸಂಸದರನ್ನು ಭೇಟಿ ಮಾಡಿದರು. ಈ ವೇಳೆ ಅವರು ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. ಈ ವೇಳೆ ಸಂಸದೆ ಸೋನಿಯಾ ಗಾಂಧಿ ಅವರನ್ನೂ ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ ತಾವು ಚೆನ್ನಾಗಿರುವುದಾಗಿ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ