ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿಸಲು ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಕೇಂದ್ರದ ಬುಡಕಟ್ಟು ಸಮುದಾಯಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರ ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಪಂಗಡಕ್ಕೆ ಸೇರಿಸಲಾಗಿತ್ತು. ಉಳಿದ ಕುರುಬ ಸಮುದಾಯ ಈಗ ಹಿಂದುಳಿದ ವರ್ಗ ೨ʼಎʼ ಯಲ್ಲಿದೆ.
ಎಲ್ಲಾ ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು.
ಈಗ ಎಲ್ಲ ಕುರುಬ ಸಮುದಾಯದವರನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ