ಜುಲೈ 27ರಂದು ಖಾಸಗಿ ಬಸ್‌, ಆಟೋ, ಟ್ಯಾಕ್ಸಿ ಸೇವೆಗಳು ಸ್ಥಗಿತ

ಬೆಂಗಳೂರು : ಖಾಸಗಿ ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳುಜುಲೈ 27ರಂದು ರಸ್ತೆಗೆ ಇಳಿಯುವುದಿಲ್ಲ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 27ಕ್ಕೆ ಖಾಸಗಿ ಬಸ್‌, ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.
ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿಯೋಜನೆ ಜಾರಿಗೆ ತಂದ ನಂತರದಿಂದ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್‌ಗಳಿಗೆ ದೊಡ್ಡ ಮಟ್ಟದ ನಷ್ಟವಾಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ. ಹೀಗಾಗಿ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದಿಂದ ಬಂದ್‌ಗೆ ಕರೆ ನೀಡಲಾಗಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ಜುಲೈ 26ರ ಮಧ್ಯರಾತ್ರಿಯಿಂದ ಜುಲೈ 27ರ ಮಧ್ಯರಾತ್ರಿ ವರೆಗೆ ಶಕ್ತಿ ಯೋಜನೆ ವಿರೋಧಿಸಿ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇವೆ ಜೊತೆಗೆ ಖಾಸಗಿ ಬಸ್‌ಗಳು ಕೂಡ ಸೇವೆ ಸ್ಥಗಿತಗೊಳಿಸಲಿವೆ.
ಬಂದ್ ಕುರಿತು ಮಾತನಾಡಿದ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಅವರು, ‘ ಜುಲೈ 26ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 27 ರ ಮಧ್ಯರಾತ್ರಿ 12 ಗಂಟೆಯವರೆಗೂ ಆಟೋ, ಟ್ಯಾಕ್ಸಿ, ಓಲಾ, ಊಬರ್ ಯಾವುದೇ ವಃನಗಳು ಓಡಾಡುವುದಿಲ್ಲ ಎಂದು ತಿಳಿಸಿದ್ದಾರೆ. ಖಾಸಗಿ ಸಾರಿಗೆಯ ಮಾಲೀಕರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿ ಸರ್ಕಾರದ ಗಮನ ಸೆಳೆಯಲು ಬಂದ್‌ಗೆ ಕರೆ ನೀಡಿದ್ದೇವೆ. ಜುಲೈ 27ರಂದು ಖಾಸಗಿ ಬಸ್‌ಗಳು ಸೇರಿದಂತೆ ಖಾಸಗಿ ಸಾರಿಗೆಗಳು ಓಡಾಟ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement