ಮಣಿಪುರ : ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಗುಂಪಿನ ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆಯರು..

ಇಂಫಾಲ: ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಯನ್ನು ಗುರುವಾರ ಸುಟ್ಟು ಹಾಕಲಾಗಿದೆ.
ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಭಟನಾಕಾರರು, ಹೆಚ್ಚಾಗಿ ಮಹಿಳೆಯರು ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚುವುದನ್ನು ದೃಶ್ಯಗಳು ತೋರಿಸಿದೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಪರಸ್ಪರ ಸಂಘರ್ಷದಲ್ಲಿ ಒಂದು ಸಮುದಾಯವೊಂದರ ಮಹಿಳೆಯರನ್ನು ಇನ್ನೊಂದು ಸಮುದಾಯದ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಆದರೆ, ಬುಧವಾರವಷ್ಟೇ ಈ ಭಯಾನಕ ದೃಶ್ಯಾವಳಿಗಳು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಿದ ನಂತರ ವೈರಲ್ ಆಗಿದೆ.

ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಗುರುವಾರ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಮತ್ತು ಸಂಭವನೀಯ ಮರಣದಂಡನೆ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 150 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ, ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೈತೆಯ್‌ ಸಮುದಾಯದ ಬೇಡಿಕೆಯನ್ನು ವಿರುದ್ಧ ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತು.
ರಾಜ್ಯದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟು ಮೈತೆಯ್‌ಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ, ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಸುಮಾರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement