ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು. ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ,
ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ.ಶಂಕರ ಅವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಇಂದು ನ್ಯಾಯಮೂರ್ತಿ ಎಸ್‌.ಸುನಿಲದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿದಾರರನ್ನು ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರ ಬಳಿ ಪ್ರತಿನಿಧಿಸಿದ್ದರು. ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಅರ್ಜಿದಾರರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಜುಲೈ 28ಕ್ಕೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದಿದೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement