ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು (PSI Recruitment Scam) ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.
ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದು, ಪೊಲೀಸ್‌ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚಿಸಿದೆ.
2021ರ ಅಕ್ಟೋಬರ್‌ 3 ರಂದು ನಡೆದಿದ್ದ 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದ ಆರೋಪ ಕೇಳಿಬಂದಿತ್ತು. ಹಿಂದಿನ ಸರ್ಕಾರ ನಂತರ ಸಿಐಡಿ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಸಿಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಸ್ಪಷ್ಟನೆ ಪಡೆದ ನಂತರ ಈ ಎಲ್ಲ 52 ಅಭ್ಯರ್ಥಿಗಳನ್ನು ಪೊಲೀಸ್‌ ಇಲಾಖೆಯ ಯಾವುದೇ ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್‌ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement