ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯ ಧ್ವಂಸ, ವಿಗ್ರಹಗಳಿಗೆ ಹಾನಿ

ಢಾಕಾ: 36 ವರ್ಷದ ವ್ಯಕ್ತಿಯೊಬ್ಬ ಬಾಂಗ್ಲಾದೇಶದ ಬ್ರಹ್ಮನ್‌ಬರಿಯಾ ಜಿಲ್ಲೆಯ ಹಿಂದೂ ದೇವಾಲಯದಲ್ಲಿ ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಾನೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯ ಹಿಂದೂ ಸಮುದಾಯದಲ್ಲಿ ಕೋಲಾಹಲ ಉಂಟು ಮಾಡಿದೆ.
ನಿಯಾಮತ್‌ಪುರ ಗ್ರಾಮದಲ್ಲಿರುವ ನಿಯಾಮತ್ ಪುರ್ ದುರ್ಗಾ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಖಲೀಲ್ ಮಿಯಾ ಎಂದು ಗುರುತಿಸಲಾಗಿದೆ. ವಿಧ್ವಂಸಕ ಕೃತ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯರು ತ್ವರಿತವಾಗಿ ಕಾರ್ಯಪ್ರವೃತ್ತರಾದರು ಮತ್ತು ಆರೋಪಿಗಳನ್ನು ಬೆನ್ನಟ್ಟಿ ಹಿಡಿಯಲು ಪೊಲೀಸರಿಗೆ ಸಹಾಯ ಮಾಡಿದರು.
ಖಲೀಲ್ ಮಿಯಾ ಬಂಧನವನ್ನು ದೃಢಪಡಿಸಿದ ಬ್ರಹ್ಮನ್‌ಬಾರಿಯಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಶಖಾವತ್ ಹೊಸೈನ್, ಆತನ ಕೃತ್ಯದ ಹಿಂದಿನ ಉದ್ದೇಶ ಗೊತ್ತಾಗಿಲ್ಲ ಎಂದು ಹೇಳಿದ್ದಾರೆ. ಈತ ಯಾಕೆ ಇಂತಹ ಹೀನಾಯ ಕೃತ್ಯಕ್ಕೆ ಕೈ ಹಾಕಿದ್ದಾನೆ ಎಂಬುದು ಇನ್ನೂ ವಿಚಾರಣೆಯಿಂದ ತಿಳಿದುಬರಬೇಕಿದೆ ಎಂದು ಹೇಳಿದ್ದಾರೆ.
ನಿಯಾಮತ್‌ಪುರ ದುರ್ಗಾ ದೇವಸ್ಥಾನದ ಅಧ್ಯಕ್ಷ ಜಗದೀಶ ದಾಸ್ ಅವರ ಪ್ರಕಾರ, ಹಠಾತ್ ವಿಧ್ವಂಸಕ ಕೃತ್ಯವು ಸ್ಥಳೀಯ ಹಿಂದೂ ಸಮುದಾಯದ ಸದಸ್ಯರಲ್ಲಿ ಕೋಪ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಖಲೀಲ್ ಮಿಯಾ ನಿಯಾಮತ್‌ಪುರ ಗ್ರಾಮದ ತನ್ನ ಸಹೋದರಿಯ ಮನೆಗೆ ಭೇಟಿ ನೀಡಲು ಬಂದಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಕೆಲವು ಸ್ಥಳೀಯರೊಂದಿಗಿನ ಜಗಳವು ಉಲ್ಬಣಗೊಂಡಿತು. ನಂತರ ಆತ ಕೇವಲ ಒಂದಲ್ಲ, ದುರ್ಗಾ ದೇವಸ್ಥಾನದೊಳಗಿನ ಐದರಿಂದ ಆರು ವಿಗ್ರಹಗಳನ್ನು ಧ್ವಂಸ ಮಾಡಿದ್ದಾನೆ ಎಂದು ವರದಿಯಾಗಿದೆ.
ಜಗದೀಶ ದಾಸ್ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಮತ್ತು ತ್ವರಿತ ವಿಚಾರಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಫ್ರಿಕಾದ ಕಾರ್ಮಿಕರನ್ನು ಚಾವಟಿಯಿಂದ ಮನಬಂದಂತೆ ಥಳಿಸಿದ ಚೀನಾ ಮ್ಯಾನೇಜರ್ ; ವ್ಯಾಪಕ ಟೀಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement